X
ഹോം ടോപ് ലിസ്റ്റിങ്ങ്‌

Dwarakish Passes Away:ಸ್ಯಾಂಡಲ್‌ವುಡ್ ಹಿರಿಯ ನಟ ದ್ವಾರಕೀಶ್ ಜೀವನದ ಕುರಿತ ಆಸಕ್ತಿಕರ ವಿಷಯಗಳಿವು!

Author: Administrator | Published: Tuesday, April 16, 2024, 12:35 PM [IST]

ಕರ್ನಾಟಕದ ಕುಳ್ಳ ಎಂದೇ ಖ್ಯಾತಿ ಪಡೆದಿರುವ ಸ್ಯಾಂಡಲ್‌ವುಡ್ ಹಿರಿಯ ನಟ ದ್ವಾರಕೀಶ್ 2024ರ ಏಪ್ರಿಲ್ 16ರಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಲ್ಲಿ ದ್ವಾರಕೀಶ್ ಜೀವನದ ಕುರಿತ ಕೆಲ ವಿಷಯಗಳನ್ನು ನೀಡಲಾಗಿದೆ.

Share:
cover image
ಭಾರತ್ ಆಟೋ ಸ್ಪೇರ್ ಸ್ಟೋರ್

1942ರ ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ ಇವರು, ಶಾರದ ವಿಲಾಸ್ & ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದರು. ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದ ದ್ವಾರಕೀಶ್, ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದರು. 1963ರಲ್ಲಿ ವ್ಯಾಪಾರ ಬಿಟ್ಟು ನಟನೆಯತ್ತ ಮುಖ ಮಾಡಿದರು.  


ಮೊದಲ ಸಿನಿಮಾ

1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಸಿನಿಮಾಗಳಲ್ಲಿ ತೆರೆಹಂಚಿಕೊಂಡಿದ್ದರು.

ಸಿನಿಮಾ ನಿರ್ಮಾಣ

ದ್ವಾರಕೀಶ್ ಅವರು 1966ರಲ್ಲಿ ಮಮತೆಯ ಬಂಧನ ಸಿನಿಮಾವನ್ನು ಇನ್ನಿಬ್ಬರು ನಿರ್ಮಾಪಕರ ಜೊತೆ ಸೇರಿ ತುಂಬಾ ಪಿಕ್ಚರ್ಸ್ ಬ್ಯಾನರ್‌ನಲ್ಲಿ ನಿರ್ಮಿಸಿದರು. 1969ರಲ್ಲಿ ಡಾ.ರಾಜ್‌ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾದರು. ಈ ಚಿತ್ರ ಬಾಕ್ಸಾಫೀಸ್‌ನಲ್ಲಿ ಸೂಪರ್ ಹಿಟ್ ಆಗಿತ್ತು. ಈ ಸಿನಿಮಾದ ಬಳಿಕ ಹಲವು ಸಿನಿಮಾಗಳನ್ನು ನಿರ್ಮಿಸಿ, ಅದರಲ್ಲಿ ಯಶಸ್ಸು ಗಳಿಸಿದರು. ದ್ವಾರಕೀಶ್ ಈವರೆಗೂ 40ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿದ್ದಾರೆ. ನಿರ್ಮಾಪಕರಾಗಿ ಹಲವು ಕಲಾವಿದರನ್ನು ಚಿತ್ರರಂಗ ಪರಿಚಯಸಿದ್ದಾರೆ.


ದ್ವಾರಕೀಶ್ ನಿರ್ದೇಶನದ ಸಿನಿಮಾಗಳು

1985ರಲ್ಲಿ ಸಿನಿಮಾ ನಿರ್ದೇಶನಕ್ಕಿಳಿದ ದ್ವಾರಕೀಶ್, ಮೊದಲ ಬಾರಿ ವಿಷ್ಣವರ್ಧನ್ ನಟನೆಯ 'ನೀ ಬರೆದ ಕಾದಂಬರಿ' ಎಂಬ ಚಿತ್ರವನ್ನು ನಿರ್ದೇಶಿಸಿದರು. ಈ ಸಿನಿಮಾ ಸಾಕಷ್ಟು ಯಶಸ್ಸು ಗಳಿಸಿತು. ನಂತರ ಡಾನ್ಸ್ ರಾಜ ಡಾನ್ಸ, ಶ್ರುತಿ, ಶ್ರುತಿ ಹಾಕಿದ ಹೆಜ್ಜೆ, ರಾಯರು ಬಂದರು ಮಾವನ ಮನೆಗೆ ಸೇರಿದಂತೆ 15ಕ್ಕೂ ಹೆಚ್ಚು ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.

ನಿರ್ಮಾಣ ಸಂಸ್ಥೆ

ಡಾ.ರಾಜ್‌ಕುಮಾರ್, ವಿಷ್ಣುವರ್ಧನ್‌ರಂತಹ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿದ ಹೆಗ್ಗಳಿಕೆ ಗಳಿಸಿರುವ ದ್ವಾರಕೀಶ್, 'ದ್ವಾರಕೀಶ್ ಚಿತ್ರ' ನಿರ್ಮಾಣ ಸಂಸ್ಥೆ ಮೂಲಕ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೇ, ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಿಸಿದ್ದಾರೆ.


Disclaimer

The images featured on this page are sourced from publicly available platforms, official press releases, and promotional materials. These images are published strictly for editorial, informational, and news reporting purposes under the principles of fair use.
We do not claim ownership of any images unless explicitly stated. All image copyrights belong to their respective photographers, production houses, or copyright holders.
If you are the rightful owner of any image and believe that its use on this website is unauthorized or objectionable, please contact us ([email protected]) with proper details. We will promptly review and remove the content if required.


Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+