X
ഹോം ടോപ് ലിസ്റ്റിങ്ങ്‌

ಘೋಸ್ಟ್ ಟು ಮ್ಯಾಕ್ಸ್: ಸ್ಯಾಂಡಲ್‌ವುಡ್‌ನಲ್ಲಿ ಮುಂಬರುವ ಪ್ಯಾನ್ ಇಂಡಿಯಾ ಸಿನಿಮಾಗಳ ಪಟ್ಟಿ ಇಲ್ಲಿದೆ.

Author: Sowmya Bairappa | Published: Tuesday, September 26, 2023, 05:12 PM [IST]

ಇತ್ತೀಚೆಗೆ ಕನ್ನಡ ಮಾತ್ರವಲ್ಲದೇ ಇಡೀ ಭಾರತೀಯ ಚಿತ್ರರಂಗದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಟ್ರೆಂಡ್ ಹೆಚ್ಚಾಗಿದೆ. ಸ್ಯಾಂಡಲ್‌ವುಡ್‌ನಲ್ಲಿ ಕೆಜಿಎಫ್ ಸಿನಿಮಾ ಬಳಿಕ ಎಲ್ಲಾ ಬಹುತೇಕ ಎಲ್ಲಾ ಸ್ಟಾರ್ ನಟರ ಚಿತ್ರಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗ್ತಿವೆ. ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾಗಳು ಪರಭಾಷೆಯ ಚಿತ್ರಗಳಿಗೆ ಪೈಪೋಟಿ ಕೊಡುತ್ತಿದೆ ಎನ್ನುವುದರಲ್ಲಿ ಅನುಮಾನವಿಲ್ಲ. ಉತ್ತಮ, ಗಟ್ಟಿತನದ ಕಥೆ, ಅದ್ಧೂರಿ ಮೇಕಿಂಗ್ ಜೊತೆಗೆ ಕನ್ನಡ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ದೇಶ ವಿದೇಶಗಳಲ್ಲಿಯೂ ಮೆಚ್ಚುಗೆ ಪಡೆಯುತ್ತಿವೆ. ಇಲ್ಲಿ ಮುಂಬರುವ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾಗಳ ಪಟ್ಟಿಯನ್ನು ನೀಡಲಾಗಿದೆ.

Share:
cover image
ಘೋಸ್ಟ್

ಎಂ.ಜಿ. ಶ್ರೀನಿವಾಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ್ಯಕ್ಷನ್ ಥ್ರಿಲ್ಲರ್ ಚಿತ್ರ `ಘೋಸ್ಟ್'. ಈ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ವಿಭಿನ್ನ ಲುಕ್‌ನಲ್ಲಿ ಮಿಂಚಿದ್ದಾರೆ. ಈ ಸಿನಿಮಾ ವಿಶೇಷ ಕಥೆಯನ್ನು ಹೊಂದಿದ್ದು, ಬಹುತೇಕ ಭಾಗ ಜೈಲಿನಲ್ಲಿಯೇ ನಡೆಯುತ್ತದೆ. ಘೋಸ್ಟ್‌ನಲ್ಲಿ 5 ಸಾಹಸ ಸನ್ನಿವೇಶಗಳಿವೆ. ಮಲಯಾಳಂ ನಟ ಜಯರಾಮ್ ಈ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಡುತ್ತಿದ್ದಾರೆ. ಚಿತ್ರಕ್ಕೆ ಸಂದೇಶ್ ನಾಗರಾಜ್ ಬಂಡವಾಳ ಹೂಡಿದ್ದು, ಬಾಲಿವುಡ್ ಖ್ಯಾತ ನಟ ಅನುಪಮ್ ಖೇರ್ ಈ ಚಿತ್ರದಲ್ಲಿ ನಟಿಸುತ್ತಿರುವುದು ಮತ್ತೊಂದು ವಿಶೇಷ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದದ್ದು, ಅಕ್ಟೋಬರ್ 19ರಂದು ಬಿಡುಗಡೆಯಾಗಲಿದೆ.

 

കൂടുതല്‍ കാണാം


ಮ್ಯಾಕ್ಸ್

ಅಭಿನಯಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ೪೬ನೇ ಸಿನಿಮಾ ಮ್ಯಾಕ್ಸ್. ಈ ಚಿತ್ರವನ್ನು ಹೊಸ ಪ್ರತಿಭೆ ವಿಜಯ್ ಕಾರ್ತಿಕೇಯ ನಿರ್ದೇಶನ ಮಾಡುತ್ತಿದ್ದಾರೆ. ಕಲೈಪುಲಿ ಎಸ್. ತನು ಜೊತೆ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸ್ವತಃ ಕಿಚ್ಚ ಅವರೇ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ 5 ಭಾಷೆಗಳಲ್ಲಿ ತೆರೆಗೆ ಬರಲಿದ್ದು, ಇದೊಂದು ಸಸ್ಪೆಷನ್ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದೆ. ಒಂದು ರಾತ್ರಿಯಲ್ಲಿ ನಡೆಯುವ ಕತೆಯನ್ನು ಮ್ಯಾಕ್ಸ್ ಒಳಗೊಂಡಿದ್ದು, ಶೇಖರ್ ಚಂದ್ರ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ, ಗಣೇಶ್ ಬಾಬು ಸಂಕಲನವಿದೆ. 

 

കൂടുതല്‍ കാണാം

ಕಾಂತಾರ 2

2022ರಲ್ಲಿ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದ ಕಾಂತಾರ ಸಿನಿಮಾ ಕನ್ನಡ ವರ್ಷನ್‌ನಿಂದಲೇ ವಿಶ್ವಾದ್ಯಂತ ಸಿನಿಪ್ರಿಯರ ಪ್ರೀತಿಯನ್ನು ಸಂಪಾದಿಸಿತ್ತು. ಈ ಮಧ್ಯೆ ಹೊರರಾಜ್ಯಗಳಿಂದಲೂ ಬೇಡಿಕೆ ಹೆಚ್ಚಾದ ಕಾರಣ ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗೆ 'ಕಾಂತಾರ' ಚಿತ್ರವನ್ನು ಡಬ್ ಮಾಡಲಾಗಿತ್ತು. ಕಾಂತಾರ ಸಿನಿಮಾ ನೋಡಿ ಬಾಲಿವುಡ್ ಫಿಲ್ಮ್ ಮೇಕರ್ಸ್ ಕೂಡ ದಂಗಾಗಿದ್ದು,  ಬಾಲಿವುಡ್ ಬಾಕ್ಸಾಫೀಸ್‌ನಲ್ಲಿ ಜಾದೂ ಮಾಡಿತ್ತು. ಕಾಂತಾರ ಸಿನಿಮಾ ಯಶಸ್ಸಿನ ಬೆನ್ನಲೇ ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾ ಮಾಡುತ್ತಿದ್ದು, ಇದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ. 

 

കൂടുതല്‍ കാണാം


U And I

ಉಪ್ಪಿ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶಿಸಿರುವ 'UI' ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಚಿತ್ರದಲ್ಲಿ ರೀಷ್ಮಾ ನಾಣಯ್ಯ, ನಿಧಿ ಸುಬ್ಬಯ್ಯ, ಪ್ರಶಾಂತ್ ಸಂಬರಗಿ ಮುಂತಾದವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ 'UI' ಚಿತ್ರಕ್ಕಿದ್ದು, ಜಿ. ಮನೋಹರನ್ ಹಾಗೂ ಕೆ.ಪಿ ಶ್ರೀಕಾಂತ್ ಭಂಡವಾಳ ಹೂಡಿದ್ದಾರೆ. ಉಪ್ಪಿ ಹುಟ್ಟುಹಬ್ಬದಂದು ಈ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಕುತೂಹಲ ಕೆರಳಿಸಿದೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಸಿನಿರಸಿಕರು ಕಾತರದಿಂದ ಕಾಯ್ತಿದ್ದಾರೆ.

 

കൂടുതല്‍ കാണാം

ಭೈರತಿ ರಣಗಲ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಯದ 126ನೇ ಸಿನಿಮಾ ಭೈರತಿ ರಣಗಲ್. ಈ ಸಿನಿಮಾಗೆ ನಿರ್ದೇಶಕ ನರ್ತನ್ ಆಕ್ಷನ್ ಕಟ್ ಹೇಳುತ್ತಿದ್ದು, ಗೀತಾ ಪಿಚ್ಚರ್ಸ್ ಬ್ಯಾನರ್ ಅಡಿ ನಿರ್ಮಾಣವಾಗುತ್ತಿದೆ. 'ದಿ ಎರಾ, ವೇರ್ ಇಟ್ ಆನ್ ಬಿಗನ್ ಎಂಬ ಅಡಿಬರಹದೊಂದಿಗೆ ಚಿತ್ರದ ಪೋಸ್ಟರ್ ಅನಾವರಣಗೊಳಿಸಲಾಗಿದೆ. ಈ ಸಿನಿಮಾ ಕೂಡ ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. 

 

 

കൂടുതല്‍ കാണാം


45 - ಫಾರ್ಟಿಫೈವ್

ಸಂಗೀತ ನಿರ್ದೇಶಕ ಅರ್ಜುನ್ಯ ಜನ್ಯ ನಿರ್ದೇಶನದ '45'  ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಮತ್ತು ರಾಜ್‌ ಬಿ ಶೆಟ್ಟಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಮೂಲಕ ಸಂಗೀತ ನಿರ್ದೇಶಕ ಅರ್ಜುನ ಜನ್ಯ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಹೊಸ ಅಧ್ಯಾಯ ಆರಂಭಿಸಿಲಿದ್ದಾರೆ. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದ್ದು, ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. 

 

കൂടുതല്‍ കാണാം

ಕಬ್ಜ ಚಾಪ್ಟರ್ 2

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್ ಚಂದ್ರು ಕಾಂಬಿನೇಷನ್ ಕಬ್ಜ ಸಿನಿಮಾ 2023ರ ಮಾರ್ಚ್ 17ರಂದು ಬಿಡುಗಡೆಯಾಗಿತ್ತು. ಅದರ ಮುಂದಿನ ಭಾಗ ಕಬ್ಜ ಚಾಪ್ಟರ್ 2. ಕಬ್ಜ ಚಿತ್ರದಲ್ಲಿ ಉಪೇಂದ್ರ, ಕಿಚ್ಚ ಸುದೀಪ್, ಶಿವ ರಾಜ್‌ಕುಮಾರ್ ಮಾತ್ರವಲ್ಲದೆ ತೆಲುಗು ಚಿತ್ರರಂಗದ ಪವರ್ ಸ್ಟಾರ್ ಪವನ್ ಕಲ್ಯಾಣ್ ಸಹ ಕಾಣಿಸಿಕೊಳ್ಳಲಿದ್ದಾರೆ. ಚಿತ್ರತಂಡ ಈಗಗಾಲೇ ಕಬ್ಜ 2 ಚಿತ್ರದ ಪೋಸ್ಟರ್ ರಿಲೀಸ್ ಮಾಡಿದೆ. ಕಬ್ಜ 2 ಸಿನಿಮಾದಲ್ಲಿ ನಾಲ್ವರು ಸ್ಟಾರ್ ನಟರು ನಟಿಸಲಿದ್ದು, ಕನ್ನಡದ ಸ್ಟಾರ್ ನಟರು ಹಾಗೂ ತೆಲುಗಿನ ಸ್ಟಾರ್ ನಟ ಒಂದೇ ಸಿನಿಮಾದಲ್ಲಿ ನಟಿಸಲಿರುವ ಈ ಚಿತ್ರ ಸಿನಿಪ್ರೇಕ್ಷಕರಿಗೆ  ಹೊಸ ಅನುಭವನೀಡಲಿದೆ. ಈ ಚಿತ್ರದ ಮೂಲಕ ಪವನ್ ಕಲ್ಯಾಣ್ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ. 

 

കൂടുതല്‍ കാണാം


ಮಾರ್ಟಿನ್

ಅದ್ಧೂರಿ ಸಿನಿಮಾ ತೆರೆಕಂಡ ಎಂಟು ವರ್ಷಗಳ ನಂತರ ಧ್ರುವ ಸರ್ಜಾ ಮತ್ತು ಎ.ಪಿ.ಅರ್ಜುನ್ 'ಮಾರ್ಟಿನ್' ಮೂಲಕ ಒಂದಾಗುತ್ತಿದ್ದಾರೆ. ಇದು ಧ್ರುವ ಸರ್ಜಾರ ಆರನೇ ಚಿತ್ರವಾಗಿದೆ. ಈ ಚಿತ್ರಕ್ಕೆ ಉದಯ್ ಕೆ ಮೆಹತಾ ಬಂಡವಾಳ ಹೂಡಿದ್ದು, ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. 

 

കൂടുതല്‍ കാണാം

Disclaimer

The images featured on this page are sourced from publicly available platforms, official press releases, and promotional materials. These images are published strictly for editorial, informational, and news reporting purposes under the principles of fair use.
We do not claim ownership of any images unless explicitly stated. All image copyrights belong to their respective photographers, production houses, or copyright holders.
If you are the rightful owner of any image and believe that its use on this website is unauthorized or objectionable, please contact us ([email protected]) with proper details. We will promptly review and remove the content if required.


Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+